ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ (Goodchari). ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಈ ಚಿತ್ರದ ಸೀಕ್ವೆಲ್ ಬರ್ತಿರೋದು ಗೊತ್ತೇ ಇದೆ. ಈಗಾಗಲೇ ರಿಲೀಸ್ ಆಗಿದ್ದ ‘ಗೂಢಚಾರಿ 2’ ಫಸ್ಟ್ ಲುಕ್ ಬರೀ ಸದ್ದು ಮಾಡಿತ್ತು. ಇದೀಗ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ.
ಗೂಢಚಾರಿ-2 ಸಿನಿಮಾಗೆ ನಾಯಕಿ ಸಿಕ್ಕಿದ್ದಾರೆ. ಪ್ರತಿಭಾನ್ವಿತ ನಟಿ ಬನಿತಾ ಸಂಧು ಶೇಶ್ (Banita Sandhu), ಅಡಿವಿ ಶೇಷ್ (Advi Shesh)ಗೆ ಜೋಡಿಯಾಗಿ ನಟಿಸುತ್ತಿದ್ದಾಳೆ. ಅಕ್ಟೋಬರ್, ಸರ್ದಾರ್ ಉದಾಮ್, ಆದಿತ್ಯ ವರ್ಮಾ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬನಿತಾ, ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಉತ್ಸುಕಳಾಗಿದ್ದೇನೆ. ನಾನು ಹಿಂದೆಂದೂ ಮಾಡದಿರುವ ವಿಭಿನ್ನ ಪಾತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಪ್ರೇಕ್ಷಕರು ನನ್ನನ್ನು ಸಂಪೂರ್ಣವಾಗಿ ಹೊಸ ಅವತಾರದಲ್ಲಿ ನೋಡುತ್ತಾರೆ. ಈ ಚಿತ್ರದಲ್ಲಿ ಕೆಲಸ ಮಾಡಲು ನಾನು ಎಕ್ಸೈಟ್ ಆಗಿದ್ದೇನೆ ಎಂದಿದ್ದಾರೆ. ಅಡಿವಿ ಶೇಷ್ ಮಾತನಾಡಿ, ಗೂಢಚಾರಿ ಪ್ರಪಂಚಕ್ಕೆ ಬಬಿತಾ ಅವರಿಗೆ ಸ್ವಾಗತ..ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.