ಬೆಂಗಳೂರು:- ಬೆಂಗಳೂರು ಕಂಬಳ ಆಯೋಜಕರಿಗೆ ಬಿಬಿಎಂಪಿ ಶಾಕ್ ನೀಡಿದ್ದು, ಬ್ಯಾನರ್, ಫ್ಲೆಕ್ಸ್ ಹಾಕಿದ್ದಕ್ಕೆ ದಂಡ ವಿಧಿಸಿದೆ.
ಅರಮನೆ ಮೈದಾನದ ಸುತ್ತಮುತ್ತ ಹಾಕಿದ್ದ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಗಿದೆ. ಈ ಸಂಬಂಧಸದಾಶಿವನಗರ ಠಾಣೆಗೆ ದೂರು ಹಿನ್ನಲೆ ತೆರವುಗೊಳಿಸಲಾಗಿದೆ.
ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಕಾರವಳಿ ಭಾಗದ ಪ್ರಮುಖ ಕ್ರೀಡೆಯಾದ ಕಂಬಳವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಹಿನ್ನಲೆ ಕಂಬಳಕ್ಕೆ ಶುಭಾಶಯ ಕೋರಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರು. ಆದರೆ, ಇದು ಕಾನೂನುಬಾಹಿರ ಆದ್ದರಿಂದ ಬಿಬಿಎಂಪಿ ತೆರವುಗೊಳಿಸಿ, ದಂಡ ವಿಧಿಸಿದೆ.