ಬೆಂಗಳೂರು:- ಬಾಣಂತಿಯರ ಸರಣಿ ಸಾವು ಕೇಸ್ ಗೆ ಸಂಬಂಧಿಸಿದಂತೆ ಇದು ಸರ್ಕಾರದ ಪ್ರಾಯೋಜಿತ ಕೊಲೆ ಎಂದು ಆರ್ ಅಶೋಕ್ ಹೇಳಿದ್ದಾರೆ.
ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು: ಗೋವಿಂದ ಕಾರಜೋಳ!
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳೆಯರಿಗೆ 2,000 ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದರು.
ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. 2,000 ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ. ಹುಬ್ಬಳ್ಳಿಯಲ್ಲಿ ಬಾಣಂತಿ ಸತ್ತಿದ್ದಕ್ಕೆ ಅವರ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿಪಟೂರಿನಲ್ಲೂ ಒಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಪೂರೈಸಿದ ಐವಿ ದ್ರಾವಣದಿಂದಾಗಿ ಬಾಣಂತಿಯರು ಮೃತರಾಗುತ್ತಿದ್ದಾರೆ. ಕಾಂಗ್ರೆಸ್ನ ಸಮಾವೇಶ ನಡೆದಾಗಲೇ ಬಾಣಂತಿಯರು ಮೃತಪಟ್ಟಿದ್ದರೂ ಅಲ್ಲಿಗೆ ಹಿರಿಯ ನಾಯಕರು ಭೇಟಿ ನೀಡಿಲ್ಲ ಎಂದು ದೂರಿದರು