ತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ್ದಾರೆ.ಕುದ್ದೂರು ಗ್ರಾಮದ ದೀಪಕ್ ಪತ್ನಿ 28 ವರ್ಷದ ಸಿಂಧು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಸಿಂಧು ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಆರೋಪಿಸಿ, ತಡರಾತ್ರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು.
ಗುರುವಾರ ರಾತ್ರಿವರೆಗೂ ಸಹ ಆಸ್ಪತ್ರೆ ವೈದ್ಯರೇ ಚಿಕಿತ್ಸೆ ನೀಡಿದ್ದಾರೆ. ಆದರೆ ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ಏಕಾಏಕಿ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಾರೆ. ಅದರಂತೆ ಆಸ್ಪತ್ರೆಯಿಂದ ಕರೆದುಕೊಂಡು ಹೋದ ಸ್ವಲ್ಪ ದೂರದಲ್ಲೇ ಸಿಂಧು ಕೊನೆಯುಸಿರೆಳೆದಿದ್ದಾರೆ.
ರಾತ್ರಿವರೆಗೂ ಚಿಕಿತ್ಸೆ ನೀಡಿದ ವೈದ್ಯರು ನಂತರ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಾರೆ. ಆದರೆ ಆಸ್ಪತ್ರೆಯಿಂದ ಸ್ವಲ್ಪ ದೂರ ಹೋಗುವಷ್ಟರಲ್ಲಿ ಬಾಣಂತಿ ಮೃತಪಟ್ಟಿದ್ದಾರೆ ಎಂಬುದು ಕುಟುಂಬಸ್ಥರ ಆರೋಪವಾಗಿದೆ.