ಧಾರವಾಡ: ಡಿ.3 ಕಳೆದ ದಿನ ತಡ ರಾತ್ರಿ ಧಾರವಾಡದ ಕೊಪ್ಪದ ಕೇರಿ ಶಿವಾಲಯ ಬಳಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯ ವಿಡಿಯೋ ವೈರಲ್ ಆಗಿದೆ. ನಿನ್ನೆ ರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ಓರ್ವ ವ್ಯಕ್ತಿ ಮಚ್ಚಿನಿಂದ ವ್ಯಕ್ತಿಯ ಮೇಲೆ ದಾಳಿ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಸಹೋದರನಿಂದಲೇ ಹತ್ತೆಯಾಗಿರುವ ಶಂಕೆಯಾಗಿದೆ.
ಈಗಾಗಲೇ ಹತ್ಯೆಯ ವಿಡಿಯೋ ಇಟ್ಟುಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ್ದಾರೆ. ನಿಂಗಪ್ಪ ಹಡಪದ (60) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆಯಾಗಿದೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲು ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.