ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಹಾಡು ಹಗಲೇ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ಶೇಷಾದ್ರಿಪುರಂ ನಲ್ಲಿ ನಡೆದಿದೆ. ಅಜಿತ್ ಎಂಬಾತನ ಕೊಲೆ ಮಾಡಿ ಎಸ್ಕೇಪ್ ಆಗಿರುವ ದುಷ್ಕರ್ಮಿಗಳು ಹಳೆ ದ್ವೇಷ ಹಿನ್ನೆಲೆಯಲ್ಲಿ ನಡೆದಿರೋ ಕೊಲೆಯಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
BSY ವಿರುದ್ಧ ಪೋಕ್ಸೋ ಕೇಸ್: ವಿಚಾರಣೆ ಆ. 22ಕ್ಕೆ ನಿಗದಿಪಡಿಸಿದ ಹೈಕೋರ್ಟ್
ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ
ಇನ್ನೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು. ಶೇಷಾದ್ರಿಪುರ ಪೊಲೀಸ್ ಠಾಣೆ ರೌಡಿಶೀಟರ್ ಆಗಿದ್ದ ಅಜಿತ್, ಗುರುವಾರ ಮಧ್ಯಾಹ್ನ 4:15 ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ.
ಈ ವೇಳೆ ಅಟ್ಯಾಕ್ ಮಾಡಿರುವ ಹಂತಕರ ಗ್ಯಾಂಗ್, ಮಾರಕಾಸ್ತ್ರ ಬೀಸಿದ ರಭಸಕ್ಕೆ ಅಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಧ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.