ಹುಬ್ಬಳ್ಳಿ:- ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ ನಡೆದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ಮೃತ ವ್ಯಕ್ತಿ ಎನ್ನಲಾಗಿದೆ. ಆಸ್ತಿ ವಿಚಾರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.
ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.