ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಲಾಂಗ್ನಿಂದ ಕೊಚ್ಚಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಸೆಂಚುರಿ: ವಿಶೇಷ ಮೈಲುಗಲ್ಲು ಮುಟ್ಟಿದ ಮೊಹಮ್ಮದ್ ಸಿರಾಜ್!
ಬಂಧಿತ ಆರೋಪಿಗಳನ್ನು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷ ಹಿನ್ನಲೆ ಹತ್ಯೆ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.
ಘಟನೆ ಹಿನ್ನೆಲೆ:-
ವೆಂಕಟೇಶ್ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯ್ಕನಹಳ್ಳಿ ಗೆಟ್ ಬಳಿ ಇದ್ದ ಮೆಡಿಕಲ್ ಶಾಪ್ನಿಂದ ಬೈಕ್ನಲ್ಲಿ ವಾಪಸ್ ಮನೆಗೆ ಹೊರಟಿದ್ದರು. ದಾರಿ ಮಧ್ಯೆ ವೆಂಕಟೇಶ್ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರ ಮೈ-ಕೈ, ಬೆನ್ನು ಮತ್ತು ಹೊಟ್ಟೆಗೆ ಹಿಗ್ಗಾ ಮುಗ್ಗಾ ಲಾಂಗ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.