ಬೆಳಗಾವಿ :- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಲಕ್ಷ್ಮಣ ಸವದಿ ಆಪ್ತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರು ರಾಮೇಶ್ವರ ಕೆಫೆ’ ಬಾಂಬ್ ಸ್ಪೋಟ ಕೇಸ್ – ಆರೋಪಿ ಕಸ್ಟಡಿ ಅಂತ್ಯಗೊಳಿಸಿದ NIA!
58 ವರ್ಷದ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಘಟನೆ ನಡೆದಿದೆ.
ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.