ಬೆಂಗಳೂರು:- ಬರೀ ಮುಡಾ ಒಂದೇ ಅಲ್ಲ, ಸಿದ್ದರಾಮಯ್ಯರದ್ದು ಇನ್ನೂ ಬಹಳ ಇದೆ ಎಂದು ರಮೇಶ್ ಜಿಗಜಿಣಗಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯರದ್ದು ಇದೊಂದೇ ಕೇಸ್ ಅಲ್ಲ. ಇನ್ನೂ ಬಹಳ ಇವೆ ಎಂದರು. ಕೇಸ್ ಆಗುವುದಂತೂ ಸತ್ಯ. ಇದೆಲ್ಲಾ ಬಿಜೆಪಿ ಪ್ಲ್ಯಾನ್ ಅಲ್ಲ. ಅವರ ಜನರೇ ಪ್ಲ್ಯಾನ್ ಹಾಕುತ್ತಾರೆಂದು ಬಾಂಬ್ ಸಿಡಿಸಿದ್ದಾರೆ.
ಇದರಲ್ಲಿ ಬಿಜೆಪಿಯವರ ಪಾತ್ರವಿಲ್ಲ. ಅವರ ಪಾರ್ಟಿಯವರದ್ದೇ ಪಾತ್ರವಿದೆ. ಸಿಎಂ ವಿರುದ್ದದ ಮಾಹಿತಿಯನ್ನು ಕಾಂಗ್ರೆಸ್ನವರೇ ನಮಗೆ ಮಾಹಿತಿ ನೀಡುತ್ತಿದ್ದಾರೆ. ಅವರು ಕೊಡುತ್ತಾರೆಂದು ನಾವು ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಸಂಸದ ಸುಧಾಕರ್ ಸವಾಲನ್ನು ಪ್ರೀತಿಯಿಂದ ಸ್ವೀಕರಿಸ್ತೇನೆ: DCM ಡಿಕೆಶಿ!
ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಕಾಂಗ್ರೆಸ್ ನಾಯಕರು ಹಾಗೂ ಬಿಜೆಪಿಯವರು ಬಳಕೆ ಮಾಡಿಕೊಂಡರು ಎಂಬ ವಿಚಾರವಾಗಿ ಮಾತನಾಡಿದ್ದು, ಮುಡಾದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು ನಿಜ. ಹಾಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಿದ್ದೇವೆ. ಸಿದ್ದರಾಮಯ್ಯ ಒಳ್ಳೆ ಮನುಷ್ಯ, ಆತನ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕ. ಆದರೆ ಈ ವಿಷಯದಲ್ಲಿ ಅವರು ಅಧಿಕಾರಕ್ಕೆ ಬೆನ್ನು ಹತ್ತಿದ್ದಾರೆಂದು ಆರೋಪಿಸಿದ್ದಾರೆ. ಈ ವಿಚಾರದಲ್ಲಿ ನನಗೂ ಬಹಳ ಕೆಡುಕೆನಿಸುತ್ತದೆ. ಹಿಂದೆ ಫೋನ್ ಕದ್ದಾಲಿಕೆ ವಿಚಾರ ಬಂದಾಗ ರಾಮಕೃಷ್ಣ ಹೆಗಡೆ ರಾಜೀನಾಮೆ ನೀಡಿದ್ದರು. ಇಂದಿಗೂ ಅವರ ಹೆಸರಿಗೆ ಮುಂದಿನ 50 ವರ್ಷ ಹೆಗಡೆ ಅವರ ಹೆಸರು ಇರುತ್ತದೆ. ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ ಅವರದ್ದೂ ಹೆಸರು ಇರುತ್ತಿತ್ತು. ಆದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿಲ್ಲ. ಇವರು ಅಧಿಕಾರಕ್ಕೆ ಬೆನ್ನು ಹತ್ತಿದ್ದಾರೆ. ಯಾವುದೇ ತಪ್ಪಿಲ್ಲಾ ಎಂದು ಸಿಎಂ ಹೇಳುತ್ತಿದ್ದಾರೆ. ನಾಳೆ ಕೋರ್ಟ್ ಹೇಳುತ್ತದೆಯಲ್ಲ ಎಂದು ಹೇಳಿದ್ದಾರೆ.