ಬೆಂಗಳೂರು:- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಾಳೆಯಿಂದ 04 ದಿನಗಳ ವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಹವಾಮಾನದಲ್ಲಿ ಬದಲಾವಣೆಗಳ ಕಾರಣದಿಂದಾಗಿ ಮುಂದಿನ ನಾಲ್ಕು ದಿನಗಳ ಪೈಕಿ ಮೊದಲ ಮೂರು ದಿನ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾ, ಮಂಡ್ಯ, ಶಿವಮೊಗ್ಗ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಇಲ್ಲವೇ ಹಗುರ ಮಳೆ ಬರಬಹುದು.
ನಂತರ ಡಿಸೆಂಬರ್ 27 ಮತ್ತು 28ರಂದು ಈ ಮೇಲಿನ ಎಲ್ಲ ಜಿಲ್ಲೆಗಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ನಿರೀಕ್ಷೆ ಇದೆ. ಏಕೆಂದರೆ ಅಷ್ಟೊತ್ತಿಗಾಗಿ ವಾಯುಭಾರ ಕುಸಿತವು ಮತ್ತಷ್ಟು ತೀವ್ರಗೊಂಡು ಕರಾವಳಿ ಭಾಗಕ್ಕೆ ಅಪ್ಪಳಿಸುವ ನಿರೀಕ್ಷೆ ಇದೆ. ಹೀಗಾಗಿ ನಾಲ್ಕು ದಿನಗಳ ಪೈಕಿ ಕೊನೆಯ ಎರಡು ದಿನ ಭಾರೀ ಮಳೆಯ ಸಂಭವವಿದೆ ಎಂದು ಐಎಂಡಿ ಹವಾಮಾನ ತಜ್ಞರು ತಿಳಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿನ ಚಂಡಮಾರುತ ಪರಿಚಲನೆಯು ಮುಂದಿನ ಮೂರು ನಾಲ್ಕು ದಿನಗಳಲ್ಲಿ ಇನ್ನಷ್ಟು ತೀವ್ರಗೊಂಡರೆ, ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಅತೀವ ಮಳೆ ಬರಲಿದೆ. ಇದರಿಂದಾಗಿ ಚಳಿ, ಮಳೆ ಆಗಲಿದ್ದು, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲೂಬಹುದು ಎಂದು ಊಹಿಸಲಾಗಿದೆ.