ಬೆಂಗಳೂರು:- ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಗಣನೆ ಆರಂಭವಾಗಿದ್ದು, ವ್ಯಾಪಾರಸ್ಥರಿಗೆ ಸರ್ಕಾರದ ಗುಡ್ ನ್ಯೂಸ್ ಸಿಕ್ಕಿದೆ.
ಮಾಜಿ ಶಾಸಕ ಗೌರಿಶಂಕರ್ʼರಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟನೆ!
ಬಸವನಗುಡಿ ಕಡಲೆಕಾಯಿ ಪರಿಷೆಯು ಪ್ರತಿವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆಯುತ್ತದೆ. ಅದರಂತೆ ಈ ಬಾರಿ ಮುಜರಾಯಿ ಇಲಾಖೆ ನವೆಂಬರ್ 25 ಮತ್ತು 26ರಂದು ಎರಡು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಿದೆ.
ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದ ಧಾರ್ಮಿಕ ದತ್ತಿ ಪರಿಷತ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ, ಎರಡು ದಿನಗಳ ಕಾಲ ನಡೆಯಲಿರುವ ಪರಿಷೆಗೆ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ. ಸುಂಕ ರಹಿತ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ. ಹಾಗೇ, ಈ ಬಾರಿ ಯಾವುದೇ ರೀತಿಯ ಟೆಂಡರ್ ಪಕ್ರಿಯೆ ಕೂಡ ಇರುವುದಿಲ್ಲ ಎಂದು ಸಚಿವರು ಆದೇಶಿಸಿದ್ದಾರೆ.
ಇನ್ನು, ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ನವೆಂಬರ್ 15 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ನಿರ್ಧರಿಸಲಾಗಿದೆ. ಪರಿಷೆಗೆ ಬರುವವರು ಮತ್ತು ವ್ಯಾಪಾರಸ್ಥರು ಪ್ಲಾಸ್ಟಿಕ್ ಚೀಲವನ್ನು ಬಿಟ್ಟು, ಬಟ್ಟೆ ಚೀಲವನ್ನು ಬಳಸಬೇಕು ಎಂದು ನಿಯಮ ಜಾರಿ ಮಾಡಲಾಗುತ್ತದೆ