ಶಿವಮೊಗ್ಗ:- ಕನ್ನಡ ಬಿಗ್ಬಾಸ್ ಶೋಗೆ ಸಾಗರ ಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಸಾಗರದ ವಕೀಲ ಕೆ.ಎಲ್. ಭೋಜರಾಜ್ ಎಂಬವರು
ಅರ್ಜಿ ಸಲ್ಲಿಸಿದ್ದಾರೆ. ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿತ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಲಾಗಿದೆ.
ಅರ್ಜಿಯ ವಿಚಾರಣೆ ಕೈಗೊಂಡಿರುವ ಕೋರ್ಟ್ ಈ ಹಿನ್ನೆಲೆಯಲ್ಲಿ ಸಿವಿಲ್ ಕಾರ್ಯವಿಧಾನದ ಕೋಡ್ ಕಾಯಿದೆ U/sec.26, Order7 rule1 ಅಡಿಯಲ್ಲಿ ನೋಟಿಸ್ ಜಾರಿ ಮಾಡಿದೆ. ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರು ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ.
ಅಕ್ಟೋಬರ್ 28 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.