ಬೆಂಗಳೂರು: ಮಹದೇವಪುರ ಕ್ಷೇತ್ರದ ಕಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಟ್ಟಿಗನಹಳ್ಳಿ ಹಾಗೂ ಬಂಡೇ ಹೊಸೂರಿನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳೀಯ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅವೈಜ್ಞಾನಿಕ ಘನ ತ್ಯಾಜ್ಯ ವಿಲೇವಾರಿಯಿಂದ ಸ್ಥಳೀಯರಿಗೆ ರೋಗಗಳು ಹರಡುತ್ತಿವೆ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅದಷ್ಟೂ ಅಧಿಕಾರಿಗಳು ಎಚ್ಚೆತ್ತಕೊಂಡು ಕಸ ವಿಲೇವಾರಿ ಮಾಡುವುದನ್ನು ನಿಲ್ಲಿಸಿ, ಬೇರೆಡೆ ಸ್ಥಳಾಂತರಿಸುವಂತೆ ಆಗ್ರಹಿಸಿದರು.. ಬಿಬಿಎಂಪಿ ಕಸದ ಲಾರಿಗಳು ಹೆಚ್ಚಾಗಿ ಓಡಾಡುವುದರಿಂದ ರಸ್ತೆಗಳು ಹದಗೆಟ್ಟಿದ್ದು, ಕೂಡಲೇ ರಸ್ತೆಗಳು ದುರಸ್ಥಿಗೊಳಿಸಲು ಮನವಿ ಮಾಡಿದರು..