ಬೆಂಗಳೂರು:- ಬಿಬಿಎಂಪಿ ಗೇಟ್ ಬಿದ್ದು ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಘಟನೆಯಿಂದ ನನಗೆ ಬಹಳ ನೋವಾಗಿದೆ. ಈ ಬಗ್ಗೆ ತನಿಖೆ ಮಾಡುತ್ತೇವೆ. ಗೇಟ್ ಹಾಳಾದ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ. ಇದುವರೆಗೂ ಈ ಬಗ್ಗೆ ನಮ್ಮ ಗಮನಕ್ಕಂತೂ ಬಂದಿಲ್ಲ. 4 ವರ್ಷದ ಹಿಂದೆ ಮೈದಾನಕ್ಕೆ ಗೇಟ್ ಅಳವಡಿಸಲಾಗಿದೆ.
ಸಂಬಂಧಪಟ್ಟವರಿಂದ ವರದಿ ತರಿಸಿಕೊಳುತ್ತೇವೆ. ಕಳಪೆ ಮಾಡಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ನಮ್ಮ ಕಾರ್ಯಕರ್ತರ ಗಮನಕ್ಕೂ ಬಂದಿಲ್ಲ. ಯಾರಿಂದ ಲೋಪ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.