ಬೆಂಗಳೂರು: ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ಸಾಮಾನ್ಯವಾಗಿ 2 ತಿಂಗಳ ಅವಧಿಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ 5ರಷ್ಟು ರಿಯಾಯಿತಿಯನ್ನು BBMP ನೀಡುತ್ತಾ ಬಂದಿದೆ. ಆದರೆ, ಈ ವರ್ಷ ಶೇ 5ರ ರಿಯಾಯಿತಿ ಜುಲೈ ಅಂತ್ಯದವರೆಗೆ ಜಾರಿಯಲ್ಲಿರಲಿದೆ. ಈ ಸಂಬಂಧ ಬಿಬಿಎಂಪಿ ಗುರುವಾರ ಸುತ್ತೋಲೆ ಹೊರಡಿಸಿದ್ದು, ಮಾದರಿ ನೀತಿ ಸಂಹಿತೆ ಜಾರಿಯಾಗುವ ನಿರೀಕ್ಷೆ ಇದೆ.
ರಿಯಾಯಿತಿಯು 2024ರ ಜುಲೈ 31ರವರೆಗೆ ಇರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿ ಕಾಯ್ದೆಯ 2020 ರ ಸೆಕ್ಷನ್ 144ರ ಅಡಿಯಲ್ಲಿ, ಹಣಕಾಸಿನ ವರ್ಷದ ಆರಂಭದಲ್ಲಿ ತೆರಿಗೆ ಪಾವತಿ ಮಾಡುವ ಆಸ್ತಿ ಮಾಲೀಕರಿಗೆ ಸಂಸ್ಥೆಯು ಶೇ 5ರ ರಿಯಾಯಿತಿಯನ್ನು ನೀಡಲು ಅವಕಾಶವಿದೆ.
BIGG BREAKING: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ʼಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೊರಡಿಸಿದ ಸುತ್ತೋಲೆ ಪ್ರಕಾರ, ತೆರಿಗೆದಾರರು 2024-25ನೇ ಹಣಕಾಸು ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗೆ ಪಾವತಿಸಿದರೆ ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಜೊತೆಗೆ ವಿನಾಯಿತಿ ನೀಡುವ ಸೌಲಭ್ಯವನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ.
ಇನ್ನೇನು ಲೋಕಸಭೆ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇರುವುದರಿಂದ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುನಾವಣಾ ಸಂಬಂಧಿತ ಕೆಲಸಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ತೆರಿಗೆ ಪಾವತಿಗಳ ಪ್ರಕ್ರಿಯೆಗೊಳಿಸಲು ಕಷ್ಟವಾಗಲಿದೆ ತಿಳಿಸಲಾಗಿದೆ.
ಇದಲ್ಲದೆ, ಏಪ್ರಿಲ್ ತಿಂಗಳಲ್ಲಿ ಹಲವಾರು ಸಾರ್ವಜನಿಕ ರಜಾದಿನಗಳಿವೆ. ತೆರಿಗೆ ಪಾವತಿದಾರರು ಅವುಗಳನ್ನು ಆಯ್ದ ಬ್ಯಾಂಕ್ ಶಾಖೆಗಳಲ್ಲಿ ಪಾವತಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ಮತ್ತು ಆಸ್ತಿ ತೆರಿಗೆ ಸಂಗ್ರಹವನ್ನು ಖಚಿತಪಡಿಸಿಕೊಳ್ಳಲು, ತೆರಿಗೆ ಪಾವತಿದಾರರಿಗೆ ಶೇಕಡಾ 5 ರಷ್ಟು ರಿಯಾಯಿತಿ ಅವಧಿಯನ್ನು ಮೇ 1ರಿಂದ ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.