ಬೆಂಗಳೂರು:- ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಜರುಗಿದೆ.
ಶುಗರ್ ಜಾಸ್ತಿ ಆಯ್ತು ಅಂತ ಟೆನ್ಷನ್ ತಗೋಬೇಡಿ: ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆ ತಿನ್ನಿ ಸಾಕು!
ಮೃತ ಬಾಲಕನನ್ನು ನಿರಂಜನ್ ಎಂದು ಗುರುತಿಸಲಾಗಿದೆ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ.
ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಮೃತ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್ನಲ್ಲಿ ಈ ಕುಟುಂಬ ವಾಸವಾಗಿತ್ತು. ಇನ್ನು ಘಟನೆ ಬಳಿಕ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಕೈಗೊಂಡಿದ್ದಾರೆ.