ಬೆಂಗಳೂರು:- ಆಸ್ತಿ ತೆರಿಗೆ ಪಾವತಿಸದವರಿಗೆ ಬಿಬಿಎಂಪಿ ಶಾಕ್ ನೀಡಿದ್ದು, ಕಾರು, ಶಾಲಾ ಬಸ್ ಜಪ್ತಿ ಮಾಡಿದೆ.
ತೆರಿಗೆ ಬಾಕಿ ಇರಿಸಿಕೊಂಡಿರುವವರಿಂದ ಸಂಗ್ರಹಿಸುವ ಉದ್ದೇಶದೊಂದಿಗೆ ಎಸ್ಒಪಿ (ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ) ಜಾರಿಗೊಳಿಸಿದ ಮೂರು ತಿಂಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿಯ ಯಲಹಂಕ ವಿಭಾಗದಲ್ಲಿ ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ವಾಹನಗಳನ್ನು ಜಪ್ತಿ ಮಾಡಿದ ಕೆಲವೇ ಗಂಟೆಗಳ ನಂತರ, ಆಸ್ತಿ ಮಾಲೀಕರು ಬಾಕಿಯ ಶೇ 50 ರಷ್ಟನ್ನು ಪಾವತಿಸಲು ಮತ್ತು ನಮ್ಮ ನೋಟಿಸ್ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಆರು ತಿಂಗಳಲ್ಲಿ ಬಿಬಿಎಂಪಿ 10,603 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಸೀಲ್ ಮಾಡಿದೆ. ಆದರೆ, ವಶಪಡಿಸಿಕೊಂಡ ವಾಹನಗಳನ್ನು ಇಡಲು ಸೂಕ್ತ ಸ್ಥಳಾವಕಾಶ ಇಲ್ಲದ ಕಾರಣ ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಬಿಬಿಎಂಪಿ ಕಾಯ್ದೆಯಡಿ, ಸ್ಥಿರ ಮತ್ತು ಚರಾಸ್ತಿಗಳನ್ನು ವಶಪಡಿಸಿಕೊಳ್ಳಲು ಅವಕಾಶವಿದೆ.
ನಾವು ಜನರಿಗೆ ತೊಂದರೆ ನೀಡಲು ಬಯಸುವುದಿಲ್ಲ. ಆದ್ದರಿಂದ ತೆರಿಗೆಯನ್ನು ವಂಚಿಸಿದವರ ಮನೆಗೆ ಬೀಗ ಹಾಕುತ್ತಿಲ್ಲ ಎಂದು ಹಿರಿಯ ಕಂದಾಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.
46,318 ನೋಟಿಸ್ ಜಾರಿ
ಒಟ್ಟಾರೆ 2023ರ ನವೆಂಬರ್ ಮತ್ತು 2024ರ ಫೆಬ್ರವರಿ ನಡುವೆ 46,318 ಆಸ್ತಿಗಳಿಗೆ ತೆರಿಗೆ ಬಾಕಿ ವಸೂಲಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಇದೇ ಅವಧಿಯಲ್ಲಿ, ಕಂದಾಯ ಅಧಿಕಾರಿಗಳು ನಿವೇಶನಗಳನ್ನು ಸೀಲ್ ಮಾಡಿದರೂ ತೆರಿಗೆ ಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದ 7,203 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)