ಆಸ್ಟ್ರೇಲಿಯಾ ವಿರುದ್ಧದ ಸರಣಿ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ಕೊಡಲು BCCI ನಿರ್ಧಾರ ಮಾಡಿದೆ.
ಪ್ರಸ್ತುತ ತಂಡದಲ್ಲಿರುವ ಹಿರಿಯ ಆಟಗಾರರೆಂದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಈ ನಾಲ್ವರಲ್ಲಿ ಇಬ್ಬರು ಭಾರತ ತಂಡದಿಂದ ಹೊರಬೀಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಈ ನಾಲ್ವರು ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲೇ ಉಳಿದುಕೊಳ್ಳಬಹುದು. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನಾಲ್ವರ ಪಾಲಿಗೆ ನಿರ್ಣಾಯಕ.
ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ತಲುಪಲು ವಿಫಲರಾದರೆ, ಹಿರಿಯ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇಬ್ಬರು ಆಟಗಾರರಿಗೆ ಗೇಟ್ ಪಾಸ್ ನೀಡಲಿದ್ದಾರೆ. ಇನ್ನುಳಿದ ಹಿರಿಯ ಆಟಗಾರರ ಪ್ರದರ್ಶನದ ಮೇಲೂ ನಿಗಾಯಿಡುವಂತೆ ಆಯ್ಕೆ ಸಮಿತಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೀಗಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಆಸೀಸ್ ಪಿಚ್ನಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯೊಂದಿಗೆ ಈ ಆಟಗಾರರ ಟೆಸ್ಟ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.