ಬಿಸಿಸಿಐ ಷರತ್ತಿನಂತೆ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುವುದಿಲ್ಲ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ. ಲಾಹೋರ್ನ ಗಡಾಫಿ ಸ್ಟೇಡಿಯಂನಲ್ಲಿ ನವೀಕರಣ ಕಾಮಗಾರಿ ವೀಕ್ಷಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಸಿಬಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಉತ್ಸುಕವಾಗಿಲ್ಲ. ಚಾಂಪಿಯನ್ಸ್ ಟ್ರೋಫಿ ವಿಚಾರದಲ್ಲಿ ಐಸಿಸಿ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಈಗಾಗಲೇ ಟ್ರೋಫಿ ಆಯೋಜಿಸುವ ಸಲುವಾಗಿ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳನ್ನು ನವೀಕರಿಸಲು ಪಾಕಿಸ್ತಾನವು 17 ಶತಕೋಟಿ ರೂ.ಗಳನ್ನ ವಿನಿಯೋಗಿಸಿದೆ. ಅಲ್ಲದೇ ಇದು ಪಾಕಿಸ್ತಾನದ ಪ್ರತಿಷ್ಠೆಯಾಗಿದ್ದು, ಭಾರತ ತಂಡಕ್ಕಾಗಿ ಎದುರು ನೋಡುತ್ತಿದ್ದೇವೆ. ಕ್ರೀಡೆ ಮತ್ತು ರಾಜಕೀಯ ಪ್ರತ್ಯೇಕ ವಿಷಯಗಳು, ನಾವು ಎರಡನ್ನು ಒಟ್ಟಿಗೆ ಸೇರಿಸುವುದಿಲ್ಲ. ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದಿರುವ ಎಲ್ಲಾ ತಂಡಗಳು ಬರಲು ಸಿದ್ಧವಾಗಿವೆ. ಭಾರತಕ್ಕೆ ಕಾಳಜಿ ಇದ್ದರೆ ಬರಲಿ. ನಾವು ಕಾಳಜಿಯಿಂದ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Smartphone CCTV Camera: ಹಳೆ ಫೋನ್ ಬಳಸಿ, ಸಿಸಿಟಿವಿ ತಯಾರಿಸಿ! ಹೇಗೆ ಗೊತ್ತೆ..? ಇಲ್ಲಿದೆ ಟಿಕ್ಸ್
ಈಗಾಗಲೇ ಐಸಿಸಿಗೆ ವೇಳಾಪಟ್ಟಿಯನ್ನು ಕಳಿಸಿದ್ದೇವೆ. ಮುಲ್ತಾನ್, ರಾವಲ್ಪಿಂಡಿ ಹಾಗೂ ಲಾಹೋರ್ ಕ್ರೀಡಾಂಗಣಗಳು ಟ್ರೋಫಿ ಆತಿಥ್ಯ ವಹಿಸುತ್ತಿವೆ. ಭಾರತದ ಎಲ್ಲ ಪಂದ್ಯಗಳೂ ಲಾಹೋರ್ ಕ್ರೀಡಾಂಗಣದಲ್ಲಿ ನಿಗದಿಯಾಗಿವೆ. ಶೀಘ್ರದಲ್ಲೇ ಐಸಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ. ಹಾಗಾಗಿ ಪಾಕ್ ತನ್ನ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.