ಬೆಂಗಳೂರು:- ಕೊರೊನಾ ರೂಪಾಂತರಿ ತಳಿ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಎಂದು ಕೊಡಗು ಜಿಲ್ಲಾಡಳಿತಕ್ಕೆ ಸಚಿವ ಭೋಸರಾಜು ಸೂಚನೆ ನೀಡಿದ್ದಾರೆ.
ಕೇರಳದಲ್ಲಿ ಕೊರೊನಾ ರೂಪಾಂತರಿ ಜೆಎನ್1 ಪತ್ತೆಯಾಗಿದ್ದು ಗಡಿ ಜಿಲ್ಲೆ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಜಿಲ್ಲೆಯ ಆರೋಗ್ಯ ಇಲಾಖೆ ಸನ್ನದ್ದವಾಗಿದ್ದುಕೊಂಡು ಎಲ್ಲಾ ರೀತಿಯ ಪರಿಸ್ಥಿತಿಗಳನ್ನು ನಿಭಾಯಿಸಲು ಸಜ್ಜಾಗಿರಬೇಕು. ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕೊರೊನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.