ತುಮಕೂರು: ನಗರದ ಮಧುಗಿರಿ ಹಾಗೂ ಪಾವಗಡದಲ್ಲಿ ಕರಡಿಯೊಂದು ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಇಂದು ಬೆಳಿಗ್ಗೆ ಮಧುಗಿರಿ ತಾಲೂಕಿನ ಕಾಮೇಗೌಡನಹಳ್ಳಿ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷಗೊಂಡಿದೆ.
ತುಮಕೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕವನ್ನು ಉಂಟು ಮಾಡುತ್ತಿತ್ತು. ಇದೀಗ ಕರಡಿ ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಮತ್ತಷ್ಟು ಭಯವನ್ನು ಹೆಚ್ಚು ಮಾಡಿದೆ. ಕರಡಿ ಸೆರೆಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.