ಶಿವಮೊಗ್ಗ: ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಕರಡಿಯೊಂದು ನಗರ ಪ್ರದೇಶದಲ್ಲಿ ಕಂಡು ಬಂದಿದ್ದು ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗುವವರ ಮೇಲೆ ದಾಳಿ ನಡೆಸಿದ ಘಟನೆ ಸಂಭವಿಸಿದೆ. ಘಟನೆಯಲ್ಲಿ ತುಕಾರಂ ಶೆಟ್ಟಿ ಎಂಬವರ ಹೊಟ್ಟೆಯ ಭಾಗಕ್ಕೆ ತರಚಿದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ತುಕಾರಾಂ ಶೆಟ್ಟಿ ಅವರು ವಾಕಿಂಗ್ ಹೋದ ವೇಳೆ ಕರಡಿಯನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ಸಂದರ್ಭ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಿ ಬಂದ ಕರಡಿ ತುಕಾರಾಂ ಅವರ ಮೇಲೆ ದಾಳಿ ನಡೆಸಿ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
Petrol-Diesel Price Today: ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ..!
ಘಟನೆ ನಡೆದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದು ಕರಡಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಗೋಪಾಲಗೌಡ ಬಡಾವಣೆಯ ಎಫ್ ಬ್ಲಾಕ್ನಲ್ಲಿರವ ಡಿವಿಜಿ ಪಾರ್ಕ್ ಸಮೀಪ ಕರಡಿ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.