ಟೀಮ್ ಇಂಡಿಯಾ ಗೆಲುವನ್ನು ತನ್ನದಾಗಿಸಿಕೊಳ್ಳುವ ಬಯಕೆಯನ್ನು ಬಿಟ್ಟು ಬಿಡುವುದು ಉತ್ತಮ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಖಾಸಗಿ ಚಾನೆಲ್ ಚರ್ಚೆಯಲ್ಲಿ ಮಾತನಾಡಿದ ಅವರು, ಭಾರತ ತಂಡವು ಆಸ್ಟ್ರೇಲಿಯಾದಲ್ಲಿ ಆಸ್ಟ್ರೇಲಿಯಾವನ್ನು 4-0 ಅಂತರದಿಂದ ಸೋಲಿಸುವುದು ಅಸಾಧ್ಯದ ಮಾತು. ಹೀಗಾಗಿ ಅಮೋಘ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರುವ ಕನಸನ್ನು ನೀವು ಬದಿಗಿಡಿ. ಬದಲಾಗಿ ಆಸ್ಟ್ರೇಲಿಯಾದಲ್ಲಿ ಸರಣಿ ಗೆಲ್ಲುವುದಕ್ಕೆ ಪ್ರಯತ್ನ ಮಾಡಿ ಎಂದು ಗವಾಸ್ಕರ್ ಹೇಳಿದ್ದಾರೆ.
Smartphone CCTV Camera: ಹಳೆ ಫೋನ್ ಬಳಸಿ, ಸಿಸಿಟಿವಿ ತಯಾರಿಸಿ! ಹೇಗೆ ಗೊತ್ತೆ..? ಇಲ್ಲಿದೆ ಟಿಕ್ಸ್
ಟೀಮ್ ಇಂಡಿಯಾ ಅಸಂಭವ ಗೆಲುವನ್ನು ತನ್ನದಾಗಿಸಿಕೊಳ್ಳುವ ಬಯಕೆಯನ್ನು ಬಿಟ್ಟು ಬಿಡುವುದು ಉತ್ತಮ. 4-0 ಅಂತರದ ಗೆಲುವಿನ ನಿರೀಕ್ಷೆ ಬಿಟ್ಟು, ಎರಡು ಅಥವಾ ಮೂರು ಪಂದ್ಯಗಳನ್ನು ಗೆದ್ದರೂ ಅದು ಗಮನಾರ್ಹ ಸಾಧನೆಯಾಗಲಿದೆ. ಈ ಮೂಲಕ ಟೀಮ್ ಇಂಡಿಯಾ ಸರಣಿ ಗೆಲುವಿನತ್ತ ಹೆಚ್ಚಿನ ಗಮನಹರಿಸಬೇಕೆಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.