ಬೆಂಗಳೂರು: ಮೆಟ್ರೋ ರೈಲಿನಲ್ಲಿ ಭಿಕ್ಷಾಟನೆ ಮಾಡಿದ ವ್ಯಕ್ತಿಯ ಮೇಲೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ವ್ಯಕ್ತಿಯೊಬ್ಬ ನಾನೂ ಮೂಗ, ಕಿವುಡ ಎಂದು ಚೀಟಿ ತೋರಿಸಿ ಮೆಟ್ರೋ ರೈಲಿನಲ್ಲಿ ಭಿಕ್ಷಾಟನೆ ಮಾಡಿದ್ದಾನೆ. ಈ ಹಿನ್ನೆಲೆ ಮೆಟ್ರೋ ಅಧಿಕಾರಿಗಳು ಈತನ ವಿರುದ್ಧ ಮೆಟ್ರೋ ಕಾಯ್ದೆ ಸೆಕ್ಷನ್ 39ರ ಅಡಿ ಕೇಸ್ ದಾಖಲಿಸಿದ್ದಾರೆ.
59 ಮಂದಿ ಪ್ರಯಾಣಿಕರಿಗೆ ತೊಂದರೆ ಪ್ರಕರಣದಲ್ಲಿ ಕೊಪ್ಪಳ ಮೂಲದ ಮಲ್ಲಿಕಾರ್ಜುನ್ನನ್ನ ವಶಕ್ಕೆ ಪಡೆದು ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.