ಬೆಂಗಳೂರು: ದೇಶದ ಕೋಟ್ಯಂತರ ಜನರ ರಾಮಮಂದಿರ ನಿರ್ಮಾಣದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಈಡೇರಿಸಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,
ದೇಶದ ಕೋಟ್ಯಂತರ ಜನರ ರಾಮಮಂದಿರ ನಿರ್ಮಾಣದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿಜೀ (Narendra Modi) ಅವರು ಈಡೇರಿಸಿದ್ದಾರೆ. ಒಂದೆಡೆ ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ದಿನ ನಿಗದಿಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ಸರ್ಕಾರವು ಸುಮಾರು 31 ವರ್ಷಗಳಷ್ಟು ಹಳೆಯ ಪ್ರಕರಣಗಳನ್ನು ತೆಗೆದು ಹಿಂದೂಗಳನ್ನು ಬಂಧಿಸುತ್ತಿದೆ. ಇದು ಹಿಂದೂ ವಿರೋಧಿ ಸರ್ಕಾರ ಎಂದು ಟೀಕಿಸಿದರು.
Curry Leaves: ಕರಿಬೇವಿನ ಎಲೆಗಳು ಅಡುಗೆಗೂ ಸೈ, ಆರೋಗ್ಯಕ್ಕೂ ಸೈ..! ಇದರಿಂದಿವೆ ಅನೇಕ ಪ್ರಯೋಜನ
ಇನ್ನೂ ರಾಜ್ಯದ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ದ್ವೇಷ, ಸೇಡಿನ ರಾಜಕಾರಣದ ಮೂಲಕ ಕಾಂಗ್ರೆಸ್ ಅಂತ್ಯಕಾಲ ಆರಂಭವಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಾಗ್ದಾಳಿ ನಡೆಸಿದರು. ಶ್ರೀರಾಮಚಂದ್ರನೇ ಕಾಲ್ಪನಿಕ ಎನ್ನುವ ಕಾಂಗ್ರೆಸ್ಸಿಗರು ಅಯೋಧ್ಯೆಯಲ್ಲಿ (Ayodhya) ಮಹರ್ಷಿ ವಾಲ್ಮೀಕಿ ದೇವಾಲಯದ ಬಗ್ಗೆ ಮಾತನಾಡುತ್ತಾರೆ.
ಶ್ರೀರಾಮಚಂದ್ರನೇ ಕಾಲ್ಪನಿಕ ಎಂದಾದರೆ ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡಲು ನಿಮಗೇನು ಹಕ್ಕಿದೆ ಎಂದು ಪ್ರಶ್ನಿಸಿದರು. ಮೋದಿಜೀ ಅವರು ಅಯೋಧ್ಯೆ ವಿಮಾನ ನಿಲ್ದಾಣವನ್ನು ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಿದ್ದಾರೆ ಎಂದು ತಿಳಿಸಿದರು.