ವಿಜಯಪುರ : ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆದರೆ ರೆಡಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತಾನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ನಾವು ರೆಡಿ, ನಮ್ಮ ಪರ ಓರ್ವರನ್ನ ಅಭ್ಯರ್ಥಿ ಮಾಡಲು ಗಂಭೀರ ನಿರ್ಣಯ ಮಾಡಿದ್ದು, ನಮ್ಮ ಗುಂಪಿನಿಂದ ಈಗಾಗಲೇ ನಿರ್ಣಯ ಮಾಡಿದ್ದೇವೆ. ನಾನು ನಿಲ್ತಿನೋ ಯಾರು ನಿಲ್ತಾರೊ ನೋಡೋಣ ಎಂದರು. ಇದೇ ವೇಳೆ ಕಲುಷಿತ ವ್ಯಕ್ತಿಗಳಿಂದ ಬಿಜೆಪಿಯನ್ನ ದೂರವಿಡಲು ನಿರ್ಣಯ ಎಂದು ತಮ್ಮ ವಿರೋಧ ಬಣಕ್ಕೆ ತಿರುಗೇಟು ನೀಡಿದರು.
ಬಳ್ಳಾರಿ ಉಗ್ರಾಣ ನಿಗಮ ಮಂಡಳಿ ಕೇಂದ್ರಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿಗಳ ದಿಢೀರ್ ಭೇಟಿ
ಸತೀಶ್ ಜಾರಕಿಹೊಳಿ ಅವರ ಟೀಂ ವಿದೇಶ ಪ್ರಯಾಣ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಪರವಾಗಿರುವ ವ್ಯಕ್ತಿ. ಇದರ ಹಿಂದೆ ಸಿದ್ದರಾಮಯ್ಯನವರೇ ಇರಬಹುದು ಶಂಕೆ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದರು. ಕಳೆದ ವರ್ಷವೇ ಸತೀಶ್ ಜಾರಕಿಹೊಳಿ ಬೆಂಬಲಿಗರು ದುಬೈಗೆ ಹೋಗುವ ಪ್ಲಾನ್ ಇತ್ತು. ಸತೀಶ್ ಜಾರಕಿಹೊಳಿ ಹಾಗೂ ಸಿದ್ದರಾಮಯ್ಯನವರು ಎಲ್ಲರೂ ಒಂದೇ ಆಗಿದ್ದಾರೆ. ಅದು ಸಿದ್ದರಾಮಯ್ಯನವರ ನಿರ್ದೇಶನದಂತೆ ನಡೆಯುತ್ತದೆ. ಒಟ್ಟಾರೆ ಕಾಂಗ್ರೆಸ್ ನಲ್ಲಿ ಗುಂಪು ರಾಜಕೀಯ ರಾಷ್ಟ್ರೀಯ ಅಧ್ಯಕ್ಷರು ಎಚ್ಚರಿಕೆ ಕೊಟ್ಟರೂ ಸಹ ಕೇರ್ ಮಾಡುತ್ತಿಲ್ಲ ಎಂದರೆ ಅಸಮಾಧಾನದ ಹೊಗೆ ಇದೆ ಎಂದರ್ಥ ಎಂದರು.
ಇದಲ್ಲದೇ ಕಾಂಗ್ರೆಸ್ ನ ಸಾಕಷ್ಟು ಜನ ನಮಗೆ ಅಪ್ರೋಚ್ ಮಾಡಿದ್ದರೂ. ನಾವು ಒಂದಿಷ್ಟು ಜನ ಕಾಂಗ್ರೆಸ್ ಬಿಟ್ಟು ಬರ್ತೀವಿ. ಕಾಂಗ್ರೆಸ್ ಸರ್ಕಾರವನ್ನು ತೆಗೆದು ಹಾಕೋಣ ಎಂದಿದ್ದರೂ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಆಗುತ್ತಿಲ್ಲ. ನಮ್ಮ ಕ್ಷೇತ್ರಕ್ಕೆ ದುಡ್ಡು ಸಿಗುತ್ತಿಲ್ಲ ಎಂದು ನನ್ನ ಜೊತೆ ಸಾಕಷ್ಟು ಜನ ಮಾತನಾಡಿದರು ಎಂದಿದ್ದಾರೆ.