ಬೆಳಗಾವಿ:- ನಾಳೆ ಬೆಳಗಾವಿಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
Mandya: ಪ್ರತಿಭಟನೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!
ಗಾಂಧಿ ಭಾರತ ಸಮಾವೇಶ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21ರಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ’ ಸಮಾರಂಭದ ಪ್ರಯುಕ್ತ ಲಕ್ಷಾಂತರ ಜನ ಭಾಗವಹಿಸುವ ಸಂಭವವಿರುತ್ತದೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿರುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮ ಕೈಗೊಳ್ಳುವ ಅಗತ್ಯವಿದೆ.
ಆದ್ದರಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯ (ನಗರ & ಗ್ರಾಮೀಣ)ದ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಜ.21ರ ಮಂಗಳವಾರ ರಜೆ ಘೋಷಿಸಿ ಆದೇಶಿಸಲಾಗಿದೆ.