ಬೆಳಗಾವಿ:- ಯುವ ಕಾಂಗ್ರೆಸ್ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಅದರಂತೆ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾಗಿ ಬಸವರಾಜ ಕೊಟ್ರಶೆಟ್ಟಿ ಆಯ್ಕೆಯಾಗಿದ್ದಾರೆ.
ಬಸವರಾಜ ಕೊಟ್ರಶೆಟ್ಟಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರಾಗಿದ್ದಾರೆ. ಇದೀಗ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವ ಇವರಿಗೆ ಅಭಿನಂದನೆಯ ಮಹಾಪೂರವೇ ಹರಿದು ಬಂದಿದೆ.