ಬೆಳಗಾವಿ:- ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ ಜಾರಿ ಹಿನ್ನೆಲೆ, ಕೆಎಲ್ಇ, ಅರಿಹಂತ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ.
ಮಹಾರಾಷ್ಟ್ರ ಆರೋಗ್ಯ ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್ಓ ಡಾ. ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ಯಾವ ಕಾನೂನಿಡಿ ಮಹಾರಾಷ್ಟ್ರ ಆರೋಗ್ಯ ವಿಮೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿದ್ದೀರಿ? ಅದರಡಿ ಇಲ್ಲಿಯ ವರೆಗೆ ಚಿಕಿತ್ಸೆ ಪಡೆದವರ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿ ರೋಗಿಗಳ ವಿವಿರ ಸಮೇತ ಮಾಹಿತಿ ನೀಡಲು ನೋಟಿಸ್ನಲ್ಲಿ ಸೂಚಿಸಲಾಗಿದೆ.
ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದೂ ಸೂಚಿಸಲಾಗಿದೆ. ಈ ಮಧ್ಯೆ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಉದ್ಧಟತನ ತೋರಿದೆ.