ಬೆಳಗಾವಿ: 1995 ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಅನುದಾನರಹಿತ ಶಾಲಾ ಶಿಕ್ಷಕರು ಬೆಳಗಾವಿ ಸುವರ್ಣ ಸೌಧ ಪಕ್ಕದ ಸುವರ್ಣ ಗಾರ್ಡನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ಶಾಲೆಗಳನ್ನು ಉಳಿಸುವುದರಿಂದ ಮಾತ್ರ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ. ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳು ಪ್ರಾರಂಭವಾಗಿ 29 ವರ್ಷಗಳಾದರೂ ಆ ಶಾಲೆಗಳಿಗೆ ಇನ್ನೂ ಅನುದಾನ ಭಾಗ್ಯ ಸಿಕ್ಕಿಲ್ಲ. 1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ವೇತನಾನುದಾನವನ್ನು ದೊರಕಿಸಿ ಕನ್ನಡ ಭಾಷೆಯ ಉಳಿವಿಗೆ ಒತ್ತು ನೀಡಬೇಕು.
Chanakya Niti: ಅಪ್ಪಿ ತಪ್ಪಿಯೂ ಯಾರ ಮುಂದೆ ಹೇಳಬಾರದ ವಿಷಯಗಳು ಯಾವುವು ಗೊತ್ತಾ..?
ಹಾಗೂ 1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಖಾಸಗಿ ಶಾಲಾ ಮಕ್ಕಳಿಗೂ ವಿಸ್ತರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.