ಬೆಳಗಾವಿ: ಚಳಿಗಾಲ ಅಧಿವೇಶನ ದಿನಾಂಕ ಇಂದು (ನ.07) ಘೋಷಣೆಯಾಗಲಿದೆ. ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ತೆರಳಲಿದ್ದಾರೆ. ಇಬ್ಬರು ಸಭಾಪತಿಗಳು ಸಭೆ ನಡೆಸಿ ನಂತರ ದಿನಾಂಕ ಘೋಷಣೆ ಮಾಡಲಿದ್ದಾರೆ.
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ
ಚಳಿಗಾಲದ ಹಿನ್ನೆಲೆ ಸುವರ್ಣ ವಿಧಾನಸೌಧದ ಉಭಯ ಸದನಗಳನ್ನು, ಸಚಿವಾಲಯದ ಕಚೇರಿಗಳನ್ನು ಪರಿಶೀಲನೆ ಮಾಡಲಿದ್ದಾರೆ. ಬಳಿಕ ಡಿಸಿ ನಿತೇಶ್ ಪಾಟೀಲ್ ನೇತೃತ್ವದ 10 ಕಮಿಟಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮೈಕ್, ಲೈಟಿಂಗ್, ನೀರು, ಊಟ, ವಸತಿ, ವಾಹನ, ಪೊಲೀಸ್ ಭದ್ರತೆ ಬಗ್ಗೆ ಚರ್ಚೆ ಮಾಡಲಿದ್ದಾರೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸುವರ್ಣ ಸೌಧದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ.