ಸಂಸದ ಈ.ತುಕಾರಾಂ ರಾಜೀನಾಮೇಯಿಂದ ತೆರವಾಗಿದ್ದ ಸಂಡೂರು ಕ್ಷೇತ್ರದಲ್ಲಿ ಉಪಚುನಾವಣೆಗೆ ಜಿಲ್ಲಾಢಳಿತದಿಂದ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ.ಸಂಡೂರು ಕ್ಷೇತ್ರದಲ್ಲಿ 1,17,789 ಪುರುಷ, 1,18,282 ಮಹಿಳೆ ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತ ದಾರರು ಸೇರಿ 2,36,100 ಮದಾರರು ಇದ್ದು, ಮತದಾನಕ್ಕೆ 253 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಮತದಾನದ ಕಾರ್ಯಕ್ಕೆ ಸಂಡೂರು ಕ್ಷೇತ್ರದಲ್ಲಿ 1,215 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಿ, ಅವರಿಗೆ ಅಗತ್ಯ ತರಬೇತಿ ನೀಡಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿಗೆ ಭದ್ರತಾ ಸಿಬ್ಬಂ ದಿಯನ್ನು ನಿಯೋಜಿಸಲಾಗಿದೆ. ಪ್ರತಿ ಮತಗಟ್ಟೆಗಳಿಗೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.