ಬರ್ಮಿಂಗ್ಹ್ಯಾಮ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡ ವೈಟ್ವಾಷ್ ಗೆಲುವು ದಾಖಲಿಸಿದೆ. ಇಲ್ಲಿನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಅಧಿಕಾರಯುತ ಪ್ರದರ್ಶನ ನೀಡಿದ ಇಂಗ್ಲೆಂಡ್ ಮೂರು ದಿನಗಳ ಒಳಗೇ 10 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು.
T20 ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಟೀಂ ಇಂಡಿಯಾ ನೂತನ ನಾಯಕ ಸೂರ್ಯಕುಮಾರ್
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಹೊಸ ದಾಖಲೆ ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ 4ನೇ ಇನಿಂಗ್ಸ್ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಸ್ಟೋಕ್ಸ್ ಬಿರುಸಿನ ಇನಿಂಗ್ಸ್ ಆಡಿದರು.
ಎರಡನೇ ಇನಿಂಗ್ಸ್ನಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ಎಂದಿನ ಓಪನರ್ ಝ್ಯಾಕ್ ಕ್ರಾವ್ಲೀ ಬದಲಿಗೆ ಇನಿಂಗ್ಸ್ ಆರಂಭಿಸಿದ ನಾಯಕ ಬೆನ್ ಸ್ಟೋಕ್ಸ್, ಟಿ20 ಕ್ರಿಕೆಟ್ ಮಾದರಿ ಬ್ಯಾಟ್ ಬೀಸಿ ಪ್ರೇಕ್ಷಕರನ್ನು ರಂಜಿಸಿದರು. ಎದುರಿಸಿದ 28 ಎಸೆತಗಳಲ್ಲಿ 9 ಫೋರ್ ಮತ್ತು 2 ಸಿಕ್ಸರ್ಗಳೊಂದಿಗೆ ಅಜೇಯ 58 ರನ್ ಸಿಡಿಸಿ ತಂಡವನ್ನು ಸುಲಭವಾಗಿ ಗುರಿ ಮುಟ್ಟಿದರು. ಈ ನಡುವೆ 24 ಎಸೆತಗಳಲ್ಲಿ ಫಿಫ್ಟಿ ಬಾರಿಸಿ ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ಪರ ಅತಿ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಟೆಸ್ಟ್ ಇತಿಹಾಸದ 3ನೇ ಅತಿ ವೇಗದ ಅರ್ಧಶತಕ ಕೂಡ ಇದಾಗಿದೆ. ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ 21 ಎಸೆತಗಳಲ್ಲಿ ಫಿಫ್ಟಿ ಬಾರಿಸಿರುವುದು ಟೆಸ್ಟ್ ಇತಿಹಾಸದ ಅತಿ ವೇಗದ ಅರ್ಧಶತಕವಾಗಿದೆ.