ಕೇಂದ್ರ ಸರ್ಕಾರವು ಪಿಎಂ ವಿಶ್ವಕರ್ಮ ಎಂಬ ಹೊಸ ಯೋಜನೆಯನ್ನು (PM Vishwakarma Yojana) ಜಾರಿಗೊಳಿಸಿದ್ದು, ವಿವಿಧ 18 ವೃತ್ತಿಗಳಲ್ಲಿ ತೊಡಗಿರುವ ಸ್ವಯಂ ಉದ್ಯೋಗಿ ಕುಶಲಕರ್ಮಿಗಳು
ನೊಂದಣಿಗೆ ಅರ್ಹತೆಗಳೇನು?
18 ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿದ್ದು, 18 ವರ್ಷ ಮೇಲ್ಪಟ್ಟವರಾಗಿರಬೇಕು. ಒಂದು ಕುಟುಂಬದಲ್ಲಿ (ಗಂಡ, ಹೆಂಡತಿ ಮತ್ತು ಮದುವೆಯಾಗದ ಮಕ್ಕಳು) ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರು. ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು, ಕಳೆದ 5 ವರ್ಷಗಳಲ್ಲಿ ಪಿಎಂ ಇಜಿಪಿ/ಮುದ್ರಾ ಮತ್ತು ಪಿಎಂ-ಸ್ವನಿಧಿ ಸಾಲಗಳನ್ನು ಪಡೆದಿರಬಾರದು. ಮುದ್ರಾ ಮತ್ತು ಪಿಎಂ-ಸ್ವನಿಧಿ ಯೋಜನೆಗಳಲ್ಲಿ ಸಾಲ ಪಡೆದು ಪೂರ್ಣ ಮರುಪಾವತಿ ಮಾಡಿದ ಕುಶಲಕರ್ಮಿಗಳು ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
PM Vishwakarma Yojana : ಯೋಜನೆಯಿಂದ ಸಿಗುವ ಪ್ರಯೋಜನಗಳು
ಯೋಜನೆಯಡಿ ನೋಂದಣಿಯಾದ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ಕಾಲ ತರಬೇತಿಯನ್ನು ನೀಡಲಾಗುವುದು. ತರಬೇತಿ ಅವಧಿಯಲ್ಲಿ ಸ್ಟೆಫಂಡ್ ಮತ್ತು ಇತರೆ ಭತ್ಯೆ ನೀಡಲಾಗುತ್ತದೆ. ತರಬೇತಿ ನಂತರ ಪ್ರಮಾಣ ಪತ್ರದೊಂದಿಗೆ 15,000 ರೂ. ಬೆಲೆಬಾಳುವ ಉಪಕರಣ ನೀಡಲಾಗುತ್ತದೆ.
ಕುಶಲಕರ್ಮಿಗಳಿಗೆ ನೆರವು ನೀಡಲು ಮೋದಿ ಸರ್ಕಾರ ಜಾರಿಗೊಳಿಸಿರುವ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ.
ಈ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ, ಬ್ಯಾಂಕ್ ಖಾತರಿ ರಹಿತ ಸಾಲ, ಹೊಸ ಉಪಕರಣ ಸಿಗುತ್ತದೆ.
ಟ್ರೈನಿಂಗ್ ಸಮಯದಲ್ಲಿ ನಿಮಗೆ ಪ್ರತಿದಿನ ₹500 ಸ್ಟೇ ಫಂಡ್ ಕೊಡುತ್ತಾರೆ. ಟ್ರೈನಿಂಗ್ ನಂತರ ₹15,000ಗಳ ಟೂಲ್ ಕಿಟ್ ಸಹ ಸಿಗಲಿದೆ.
ನಿಮಗೆ 5% ಬಡ್ಡಿದರದಲ್ಲಿ ₹3 ಲಕ್ಷ ಸಾಲ ಸಹ ಸಿಗುತ್ತದೆ.