ಬೆಂಗಳೂರು:- ಕರ್ನಾಟಕದಲ್ಲಿ ನಿನ್ನೆ 260 ಕೊರೊನಾ ಕೇಸ್ ಪತ್ತೆ ಆಗಿದೆ. ಹಾಗೂ ಒಬ್ಬ ಸಾವನ್ನಪ್ಪಿದ್ದಾನೆ.
ಒಟ್ಟು 1,175 ಸಕ್ರಿಯ ಪ್ರಕರಣಗಳಿವೆ.
24 ಗಂಟೆಗಳ ಅವಧಿಯಲ್ಲಿ 7,497 ಪರೀಕ್ಷೆ ನಡೆಸಲಾಗಿತ್ತು. ಶೇ 3.46ರಷ್ಟು ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 1,175 ಸಕ್ರಿಯ ಪ್ರಕರಣಗಳಲ್ಲಿ 1,107 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 68 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 17 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 228 ಮಂದಿ ಚೇತರಿಸಿಕೊಂಡಿದ್ದಾರೆ.