ಬೆಂಗಳೂರು:- 15ನೇ ಆವೃತ್ತಿಯ ಏರೋ ಇಂಡಿಯಾ-2025ಕ್ಕೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14ರ ವರೆಗೆ ನಡೆಯಲಿದೆ.
ರನ್ವೇ ಟು ಎ ಬಿಲಿಯನ್ ಆಪರ್ಚುನಿಟೀಸ್’- ಬಿಲಿಯನ್ ಅವಕಾಶಗಳಿಗೆ ರನ್ ವೇ ಎಂಬ ವಿಶಾಲ ಧೇಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮ ವಿದೇಶಿ ಮತ್ತು ಭಾರತೀಯ ಸಂಸ್ಥೆಗಳ ನಡುವಿನ ಪಾಲುದಾರಿಕೆಯನ್ನು ರೂಪಿಸಲು ಮತ್ತು ಜಾಗತಿಕ ಮೌಲ್ಯ ಸರಣಿಯಲ್ಲಿ ದೇಶೀಕರಣ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಹೊಸ ಮಾರ್ಗಗಳ ಅನ್ವೇಷಣೆಗೆ ವೇದಿಕೆಯನ್ನು ಒದಗಿಸುತ್ತದೆ.
ಕಾರ್ಯಕ್ರಮದ ಮೊದಲ ಮೂರು ದಿನಗಳು ವ್ಯವಹಾರದ ದಿನಗಳಾಗಿರುತ್ತವೆ. ಆದರೆ 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ರಮ ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ ಮತ್ತು ಸ್ಥಿರ ಪ್ರದರ್ಶನಗಳನ್ನು ಒಳಗೊಂಡಿದೆ.