ಬೆಂಗಳೂರು:- ಜನವರಿ 1 ಅಂದರೆ ಹೊಸವರ್ಷದಂದೇ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನ ಆಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ
ರಾಜ್ಯದ ರಾಜಧಾನಿ ಬೆಂಗಳೂರು ಹೊಸವರ್ಷ ಬರಮಾಡಿಕೊಳ್ಳಲು ಸಜ್ಜಾಗಿದೆ. ಹಾಗೆಯೇ ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹವಾಮಾನದಲ್ಲಿಯೂ ಬದಲಾವಣೆ ಆಗುವ ಸಾಧ್ಯೆತೆಯಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಅಂದು ಮಳೆರಾಯನ ಆಗಮನ ಆಗಲಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 1ರಂದು ಕೊಡಗು ಜಿಲ್ಲೆಯ ಕೆಲವು ಕಡೆ ಮತ್ತು ಜನವರಿ 2ರರಂದು ಕೊಡಗು ಮತ್ತು ಚಿಕ್ಕ ಮಗಳೂರು ಜಿಲ್ಲೆಯ ಕೆಲವು ಭಾಗದಲ್ಲಿ ಸಾಧಾರಣ ಮಳೆ ಬೀಳುವಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರೆಯಲಿದೆ. ಅದರಲ್ಲೂ ವಿಜಯಪುರ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಕೋಲಾರ ಭಾಗದಲ್ಲಿ ಚಳಿಯ ಪ್ರಮಾಣ ಸ್ವಲ್ಪ ಹೆಚ್ಚಾಗಿಯೇ ಇರಲಿದೆ ಎಂದು ತಿಳಿಸಿದೆ. ಕಳೆ ಎರಡು ವಾರಗಳಿಂದ ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಮಳೆಯಾಗಿಲ್ಲ. ಇದಕ್ಕೂ ಮೊದಲು ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆರಾಯ ಅಬ್ಬರಿಸಿದ್ದ. ಆದರೆ ಇದೀಗ ಹೊಸವರ್ಷದ ದಿನದಂದೇ ಅಂದರೆ ಜನವರಿ 1, 2024ರಂದು ಮಂಜಿನ ನಗರಿ ಕೊಡಗಿನಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.