ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆ ವ್ಯಾಪಕ ಮಳೆ ಮುಂದುವರಿಯುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಾವಣಗೆರೆ, ಚಿತ್ರದುರ್ಗ, ತುಮಕೂರು, ವಿಜಯನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಈ ಭಾಗದಲ್ಲಿ ಸಾಧಾರಣದಿಂದ ವ್ಯಾಪಕ ಮಳೆ ಬೀಳುವ ಸಾಧ್ಯತೆಗಳು ಇವೆ.
ಆದರೆ ಉತ್ತರ ಒಳನಾಡಿನ ಭಾಗದ ಯಾವ ಜಿಲ್ಲೆಗಳಿಗೂ ಮಳೆ ಮುನ್ಸೂಚನೆ ನೀಡಿಲ್ಲ. ಕಾರಣ ಇಲ್ಲಿ ಮಳೆಯಾಗುವ, ಕೊನೆಯ ಪಕ್ಷ ತಂಪು ವಾತಾವರಣದ ಯಾವ ಮುನ್ಸೂಚನೆಗಳು ಇಲ್ಲ. ಮಳೆ ಬದಲಾಗಿ ಇಲ್ಲಿ ಇನ್ನೂ ಹಲವು ದಿವಸಗಳು ಅಧಿಕ ಬಿಸಿಲಿನ ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಐಎಂಡಿ ತನ್ನ ವರದಿಯಲ್ಲಿ ತಿಳಿಸಿದೆ.