ಬೆಂಗಳೂರು:- ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಯಲ್ಲಿ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸಾಧ್ಯತೆ ಇದೆ. ಉಳಿದಂತೆ ಒಣಹವೆ ಇರಲಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ವ್ಯಾಪಕ ಮಳೆಯಾಗಲಿದ್ದು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ ಭರ್ಜರಿ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.