ಬೆಂಗಳೂರು:– ನಗರದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಧಾನಿ ಬೆಂಗಳೂರಿನ ಐದು ಕಡೆ ಎನ್ಐಎ ದಾಳಿ ಮಾಡಿದೆ.
IPL 2024 points table: ಅಗ್ರಸ್ಥಾನಕ್ಕೇರಿದ CSK, RCB ಗೆ ಎಷ್ಟನೇ ಸ್ಥಾನ ಗೊತ್ತಾ !?
ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದುಕೊಂಡಿರುವ ವಿಚಾರ ಮಂಗಳವಾರ ತಿಳಿದುಬಂದಿತ್ತು.
ಚೆನ್ನೈನ ಮೂರು ಕಡೆ ಕೂಡ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಶಂಕಿತರ ಶೋಧ ನಡೆಸಿದೆ. ಉಗ್ರರಿಗೆ ಹಣದ ನೆರವು, ಉಗ್ರರ ಪರ ಹಣ ಸಂಗ್ರಹ ಆರೋಪದ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ನಡೆಸಿದೆ.