ಬೆಂಗಳೂರು: ರಾಜ್ಯದಲ್ಲಿ ಇಂದು 240 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಇಂದು 7,015 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಒಟ್ಟಾರೆಯಾಗಿ 993 ಸಕ್ರಿಯ ಕೊರೊನಾ ಕೇಸ್ಗಳು ದಾಖಲಾಗಿದೆ.
ಅದೇ ರೀತಿ ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನುಳಿದಂತೆ ಇಂದು ಕೋವಿಡ್-19 ರಿಂದ ಗುಣಮುಖರಾಗಿ 220 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.42%ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ (Bengaluru) ಇಂದು 124 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಅದೇ ರೀತಿ ಇಂದು ಮೈಸೂರಿನಲ್ಲಿ 19, ತುಮಕೂರಿನಲ್ಲಿ 21, ದಕ್ಷಿಣ ಕನ್ನಡದಲ್ಲಿ 2, ಶಿವಮೊಗ್ಗದಲ್ಲಿ 11 ಕೇಸ್ಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.