ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಪಾತ್ರದಲ್ಲಿ ಬರುವ ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ಪ್ರವಾಸಿ ತಾಣಗಳಿಗೆ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ.
ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ಪ್ರವಾಸಿ ತಾಣಗಳಾದ ವೆಸ್ಲಿ ಸೇತುವೆ, ಶಿವನಸಮುದ್ರ, ಭರಚುಕ್ಕಿ ಹಾಗೂ ಹೊಗೇನಕಲ್ ಜಲಪಾತ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತಿದ್ದು, ಸೆಲ್ಪಿ ತೆಗೆದುಕೊಳ್ಳುವ ಸಮಯದಲ್ಲಿ ಅವಘಡಗಳು ಸಂಭವಿಸುವ ನಿಟ್ಟಿನಲ್ಲಿ ಜುಲೈ 31ರಿಂದ ಅಗಸ್ಟ್ 2ರ ವರೆಗಿನ ಅವಧಿಯಲ್ಲಿ ಸಾರ್ವಜನಿಕರು ಪ್ರವಾಸಿ ತಾಣಗಳಿಗೆ ಪ್ರವಾಸ ಕೈಗೊಳ್ಳದಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ