ನವದೆಹಲಿ: ದೇಶದಲ್ಲಿ ಬಿಜೆಪಿಯ ಪರ ವಾತಾವರಣ ಇದೆ ಎಂದು ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ಜನ ಬಯಸಿದ್ದಾರೆ. ಸುನಾಮಿ ರೀತಿ ಭಾರತೀಯ ಜನತಾ ಪಾರ್ಟಿಯ ಅಲೆ ಎದ್ದಿದೆ. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯುತ್ತೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ದೇಶದ ಜನರು ದೇಶದ ರಕ್ಷಣೆಯ ಗ್ಯಾರಂಟಿ ಬಯಸುತ್ತಿದ್ದಾರೆ. ಅಧಿಕಾರವನ್ನು ಕಬಳಿಸುವ ಗ್ಯಾರಂಟಿಯನ್ನು ಜನರು ಬಯಸುತ್ತಿಲ್ಲ. ಗ್ಯಾರಂಟಿ ಆಮಿಷವೊಡ್ಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಇದರಿಂದ ರಾಜ್ಯದ ಜನರು ಪಶ್ಚಾತ್ತಾಪಪಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರು.