ಬೆಂಗಳೂರು:- ಭವಾನಿ ರೇವಣ್ಣ ಬೈಕ್ ಸವಾರನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಕ್ಷಮೆ ಕೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪತ್ನಿ ವರ್ತನೆಯ ಬಗ್ಗೆ ಯಾರಿಗಾದರೂ ನೋವಾದರೆ ಕ್ಷಮೆ ಕೋರುತ್ತೇನೆ. ಬೈಕ್ ಸವಾರ ಕುಡಿದು ಬೈಕ್ ಓಡಿಸಿದ್ದ. ನಾವೇನು ಅವರ ಬಳಿ ಡ್ಯಾಮೇಜ್ ಹಣ ಕೊಡಿ ಎಂದು ಕೇಳಲಿಲ್ಲ. ಏನಾದರೂ ಹೆಚ್ಚು ಕಮ್ಮಿ ಆಗಿದ್ರೆ ಯಾರು ಹೊಣೆ? ಬೇಕಾದರೆ ಭವಾನಿ ರೇವಣ್ಣ ಅವರಿಂದಲೂ ಕ್ಷಮೆ ಕೇಳಿಸುತ್ತೇನೆ. ಸಿಟ್ಟಾಗಿ ಭವಾನಿ ಮಾತನಾಡಿದ್ದಾರೆ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಬೈಕ್ ಅವನೇ ಬಂದು ಸೈಡ್ನಿಂದ ಕಾರಿಗೆ ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗಾಗುತ್ತಿತ್ತು?, ಅವರು ಏನೂ ಅಹಂಕಾರ ಮಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಅವರು ಸಿಟ್ಟಿನಲ್ಲಿ ಮಾತನಾಡಿದ್ದಾರೆ. ನಮ್ಮಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಲ್ಲ. ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ.
ಅವರು ಬೈಕ್ ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು? ಎಂದು ಪ್ರಶ್ನಿಸಿದರು. ಈ ಘಟನೆಯಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ, ಭವಾನಿ ಯಾವತ್ತೂ ಯಾರಿಗೂ ನೋವು ಮಾಡಿಲ್ಲ. ಸ್ನೇಹಿತರ ಕಾರು ಅಂತ ಹಾಗೇ ಮಾಡಿದ್ದಾರೆ. ನಮ್ಮ ಕುಟುಂಬ ಆ ತರ ಇಲ್ಲ. ಗಾಡಿ ಅವಘಡ ಆದ ಮೇಲೆ ದೂರು ಕೊಡದಿದ್ದರೆ ತಪ್ಪಾಗಲ್ಲವಾ? ಎಂದು ಪ್ರಶ್ನಿಸಿದರು.