ವಿಶಾಖಪಟ್ಟಣಂ: ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲೇ ದ್ವಿಶತಕ ಸಿಡಿಸಿದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ (England) ತಂಡಕ್ಕೆ ಮುಳುವಾಗಿದ್ದಾರೆ. ಈ ಬಗ್ಗೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ (Michael Vaughan) ಅವರೇ ಖುದ್ದಾಗಿ ಹೇಳಿಕೊಂಡಿದ್ದಾರೆ.
ಪಾಡ್ಕಾಸ್ಟ್ ಸಂದರ್ಶನವೊಂದರಲ್ಲಿ ಮಾತನಾಡಿರುವ ಮೈಕೆಲ್ ವಾನ್, ಶುಭಮನ್ ಗಿಲ್, ರೋಹಿತ್ ಶರ್ಮಾ ಅಲ್ಲ, ಯಶಸ್ವಿ ಜೈಸ್ವಾಲ್ (Yashasvi Jaiswal) ಇಂಗ್ಲೆಂಡ್ ತಂಡಕ್ಕೆ ದೊಡ್ಡ ಸಮಸ್ಯೆಯಾಗಿದ್ದಾರೆ. ನಂಬಲಸಾಧ್ಯವಾದ ಆಟಗಾರ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
2023ರ ಐಪಿಎಲ್ (IPL) ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ನಾನು ಭೇಟಿಯಾಗಿದ್ದೆ. ಮರುದಿನವೇ ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಚೊಚ್ಚಲ ಐಪಿಎಲ್ ಶತಕ (62 ಎಸೆತಗಳಲ್ಲಿ 124 ರನ್) ಸಿಡಿಸಿದ್ದರು. ಇದೀಗ ವಿಶ್ವದ ಅತ್ಯುತ್ತಮ ತಂಡದ ವಿರುದ್ಧ ದ್ವಿಶತಕ ಸಿಡಿಸಿದ್ದಾರೆ. ಈತ ಇಂಗ್ಲೆಂಡ್ ತಂಡಕ್ಕೆ ಸಮಸ್ಯೆ ಎಂದು ನಾನು ಖುದ್ದಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)