ನವದೆಹಲಿ:- ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ಗೆ ರೂಸ್ ಅವೆನ್ಯೂ ಕೋರ್ಟ್ ಜಾಮೀನು ನೀಡಿದೆ.
ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು 1 ಲಕ್ಷ ಬಾಂಡ್ ಮೇಲೆ ಅವರಿಗೆ ಜಾಮೀನು ನೀಡಿದ್ದಾರೆ. ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಕುರಿತು ಪ್ರಾಸಿಕ್ಯೂಷನ್ ಮತ್ತು ವಕೀಲರ ವಾದವನ್ನು ಆಲಿಸಿದ ಬಳಿಕ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ. ಕೇಜ್ರಿವಾಲ್ ನಾಳೆ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.