ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಅವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು ಕೋರ್ಟ್ ವಜಾಗಗೊಳಿಸಿದೆ. ಸಿಬಿಐ ತನಿಖೆಗೆ ಕೋರಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಇಂದು ಆದೇಶ ಪ್ರಕಟಿಸಿದ್ದು, ಸಿಬಿಐ ತನಿಖೆಗೆ ನೀಡಲು ತಿರಸ್ಕರಿಸಿದೆ.
ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ, ತನಿಖಾ ವರದಿಯಲ್ಲಿ ತಾರತಮ್ಯ ಕಾಣಿಸುತ್ತಿಲ್ಲ. ಹೀಗಾಗಿ ಮುಡಾ ಕೇಸ್ ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಆದೇಶ ನೀಡಿದೆ.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು.