ಬೆಂಗಳೂರು:- ಇನ್ಫೋಸಿಸ್ ಸಹ ಸಂಸ್ಥಾಪಕ ವಿರುದ್ಧದ ಜಾತಿ ನಿಂದನೆ ಪ್ರಕರಣಕ್ಕೆ ಕೋರ್ಟ್ ತಡೆ ನೀಡಿದೆ. ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣನ್ ಸೇರಿದಂತೆ ಮತ್ತಿತರರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಕೇಸ್ಗೆ ಹೈಕೋರ್ಟ್ ತಡೆ ನೀಡಿದೆ.
ಮನೆಯಲ್ಲಿ ಇಲಿಗಳ ಕಾಟ ಹೆಚ್ಚಿದ್ಯಾ!? ಹಾಗಿದ್ರೆ ಈ ಉಪಾಯ ಮಾಡಿ! 100% ರಿಸಲ್ಟ್ ಗ್ಯಾರಂಟಿ!
ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ಕೇಸ್ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಸೋಮವಾರ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದ್ರೆ, ಇದೀಗ ಹೈಕೋರ್ಟ್ ಈ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ತಡೆ ಕೋರಿ ಕ್ರಿಶ್ ಗೋಪಾಲಕೃಷ್ಣನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.