ಬೆಂಗಳೂರು:- ತೇಜಸ್ವಿ ಸೂರ್ಯಗೆ ಬಿಗ್ ರಿಲೀಫ್: ಸಂಸದರ ವಿರುದ್ಧ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಮುಡಾ ಹಗರಣ: ಸಿದ್ದರಾಮಯ್ಯ ಆಪ್ತರಿಗೆ ಸತತ 9 ಗಂಟೆ ಇಡಿ ಡ್ರಿಲ್; CM ಗೂ ಸಮನ್ಸ್!?
ವಕ್ಫ್ ನೋಟಿಸ್ ನೀಡಿದ ಕಾರಣ ಹಾವೇರಿಯ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಹಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್ಐಆರ್ಗೆ ಗುರುವಾರ ತಡೆ ನೀಡಿದೆ. ಇನ್ನೂ ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ